
Public Ride News
ಧಾರವಾಡ
ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಗಂಭೀರವಾಗಿ ಗಾಯಗೊಂಡ ಘಟನೆ ನವಲಗುಂದಲ್ಲಿ ಹುಬ್ಬಳ್ಳಿನವಲಗುಂದ ಮುಖ್ಯ ರಾತ್ರಿ ನಡೆದಿದೆ.
ನವಲಗುಂದ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಧಾರವಾಡ ಪೊಲೀಸ್ ಟ್ರೇನಿಂಗ್ ಸ್ಕೂಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಶರಣುಗೌಡ ಪಾಟೀಲ್ ಅವರ ಬೈಕ್ ಗೆ ಎದುರುಗಡೆಯಿಂದ ಬಂದ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಶರಣುಗೌಡರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆಯುತ್ತಿದಂತೆ ಸ್ಥಳೀಯ ವಾಹನ ಸವಾರರು ಬೈಕ್ ಸವಾರನ ರಕ್ಷಣೆ ಮಾಡಿ, ನವಲಗುಂದ ಪೊಲೀಸರಿಗೆ ಮಾಹಿತಿನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಗೊಂಡ ಸಿಬ್ಬಂದಿಯನ್ನು ಆಂಬ್ಯುಲೆನ್ಸ್ ಮೂಲಕ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ರವಾನೆ ಮಾಡಿದ್ದಾರೆ. ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಯ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಈ ಕುರಿತು ನವಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.