
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ಹತ್ಯೆ, ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ಖಂಡಿಸಿ ಹಿಂದೂ ಸಮಾಜದ ಕಾರ್ಯಕರ್ತರು ನಾಮಫಲಕಗಳ ಹಿಡಿದು ದಾಸರಹಳ್ಳಿ ಮೆಟ್ರೊ ನಿಲ್ದಾಣದ ಬಳಿ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
‘ಬಾಂಗ್ಲಾ ದೇಶದಲ್ಲಿ ವ್ಯವಸ್ಥಿತವಾಗಿ ದಾಳಿಗಳು ನಡೆಯುತ್ತಿವೆ. ಬಾಂಗ್ಲಾದಲ್ಲಿರುವ ಮತೀಯವಾದಿಗಳು ಹಿಂದೂಗಳನ್ನು ದೇಶದಿಂದ ಹೊರ ಹಾಕಲು ಇಂತಹ ಕುತಂತ್ರ ಮಾಡುತ್ತಿದ್ದು, ಸಾಲು ಸಾಲು ಹಬ್ಬಗಳ ಸಂದರ್ಭದಲ್ಲಿ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡನೀಯವಾಗಿದೆ. ಈ ಬಗ್ಗೆ ವಿಶ್ವಸಂಸ್ಥೆ ಮದ್ಯಪ್ರವೇಶ ಮಾಡಿ ಹಿಂದೂಗಳ ರಕ್ಷಣೆ ಮಾಡಬೇಕೆಂದು’ಮನವಿ ಮಾಡಿದರು.
‘ಅಲ್ಲದೇ ಹಿಂದೂಗಳ ಮನೆಗಳಿಗೆ ನುಗ್ಗಿ ಅವರ ಅಸ್ತಿಪಾಸ್ತಿ ನಷ್ಟ, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿ ಕ್ರೌರ್ಯ ಮೆರೆಯುತ್ತಿದ್ದಾರೆ ಇದು ಖಂಡನೀಯ’ಎಂದು ಅಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯಎರಡನೇ ಹಂತ, ದಾಸರಹಳ್ಳಿ ಮೆಟ್ರೊ, ಚಿಕ್ಕಬಾಣಾವರ, ಮಲ್ಲಸಂದ್ರದ ಕೆಂಪೇಗೌಡ ವೃತ್ತ ಸೇರಿದಂತೆ ಹಲವು ಕಡೆ ಹಿಂದೂ ಸಮಾಜದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.