
ಹುಬ್ಬಳ್ಳಿ
ಹಳೇ ಹುಬ್ಬಳ್ಳಿಯ ಆನಂದ ನಗರದ ಮುಖ್ಯ ರಸ್ತೆಯ ಚರಂಡಿಯಲ್ಲಿ ಅನುಮಾನಸ್ಪದವಾಗಿ ವ್ಯಕ್ತಿಯ ಶವ ಪತ್ತೆ, ಚರಂಡಿಯಲ್ಲಿ ಬಿದ್ದು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಚರಂಡಿಯಲ್ಲಿನ ವ್ಯಕ್ತಿಯ ಶವ ನೋಡಿ ಸ್ಥಳೀಯರು ಬೆಚ್ಚಿಬಿದ್ದಾರೆ, ಸದ್ಯ ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.