April 19, 2025

ಪಬ್ಲಿಕ್ ರೈಡ್ ಹುಬ್ಬಳ್ಳಿ

ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನ‌ಪರಿಷತ್ ಚಲವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದರು. ‌

ನಗರದ ಪಕ್ಷದ ಕಛೇರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರದಲ್ಲಿ ಯಾವ ಸ್ಥಳದಲ್ಲಿ ಎಂದು ಬರೆದಿರುವ ಜಾಗಕ್ಕೆ ವೈಟ್‌ನರ್ ಹಾಕಿದವರು ಯಾರು..?. ವೈಟ್ ನರ್ ಹಾಕಿದವರು ಯಾರು..? ಇದು ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ನೀವು ನಿವೇಶನ ಕಬಳಿಸಲು ಹಾಗೂ ನಿಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಮಾಡಿರುವ ಷಡ್ಯಂತ್ರ ಅಲ್ಲವೇ ಸಿದ್ದರಾಮಯ್ಯನವರೇ..? ಎಂದು ಕಟ್ಟುವಾಗಿ ಪ್ರಶ್ನೆ ಮಾಡಿದರು.

ಜತೆಗೆ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಭ್ರಷ್ಟಾಚಾರದ “ಕೈ”ವಾಡಕ್ಕೆ ಮತ್ತಷ್ಟು ಸಾಕ್ಷಿಗಳನ್ನು ಮಾಧ್ಯಮಗಳೇ ಬೆತ್ತಲು ಮಾಡುತ್ತಿವೆ. ನಾವು ಇಂತಹ ಜಾಗದಲ್ಲೇ ನಿವೇಶನ ಕೊಡಿ ಎಂದು ಅರ್ಜಿ ಹಾಕಿರಲಿಲ್ಲ ಎಂದು ಸುಳ್ಳು ಸಮರ್ಥನೆ ಕೊಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಈಗೇನು ಹೇಳುತ್ತೀರಿ..?. ಇಂತಹದ್ದೇ ಜಾಗದಲ್ಲಿ ಸೈಟು ಕೊಡುವಂತೆ ನಿಮ್ಮ ಧರ್ಮಪತ್ನಿ ಪಾರ್ವತಿ ಅವರೇ ಮುಡಾ ಪ್ರಾಧಿಕಾರಕ್ಕೆ ಬರೆದಿರುವ ಪತ್ರವೇ ಪ್ರತ್ಯಕ್ಷ್ಯ ಸಾಕ್ಷಿಯಾಗಿ ನಿಂತಿದೆ.

ಮುಖ್ಯಮಂತ್ರಿಯಾಗಿ ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ, ಕಾನೂನಿನ ದುರುಪಯೋಗ ಮಾಡಿಕೊಂಡಿದ್ದೀರಿ..! ಸತ್ಯಹರಿಶ್ಚಂದ್ರ ಎಂದು ಬೆನ್ನುತಟ್ಟಿಕೊಳ್ಳುವ ನೀವು ಹಾಗೂ ನಿಮ್ಮ ಕರ್ನಾಟಕ ಕಾಂಗ್ರೆಸ್‌ ನಾಯಕರು ರಾಜ್ಯದ ಜನತೆಗೆ ಆ ಪತ್ರದ ಬಗ್ಗೆ ಉತ್ತರಿಸಿ ಎಂದು ಆಗ್ರಹಿಸಿದರು. ಅಷ್ಟೇಯಲ್ಲದೆ ಮುಡಾದಲ್ಲಿ ಭ್ರಷ್ಟಾಚಾರ ಎಸಗಿರುವ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆ ಹುದ್ದೆಯ ಘನತೆಯನ್ನು ಕಾಪಾಡಿ ಎಂದು ಒತ್ತಾಯ ಮಾಡಿದರು.

Leave a Reply

Your email address will not be published. Required fields are marked *

error: Content is protected !!