
ಹುಬ್ಬಳ್ಳಿ
ಆ್ಯಂಕರ್ ಓಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಮಗು ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ.
ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳಾಗಿದ್ದಾರೆ. ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಜಾಫರಸಾಬ ಮಂಗಳೂರು (60) ಮುಸ್ತಫಾ (ಸಾಹೇಬ) ಮಂಗಳೂರು (36) ಶೊಹೇಬ್ ಮಂಗಳೂರು (06) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಎಸ್‌ಡಿಎಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.