
ಪಬ್ಲಿಕ್ ರೈಡ್ ಹುಬ್ಬಳ್ಳಿ
ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ರಸ್ತೆಯ ತಡಸ ಕ್ರಾಸ್ ಬಳಿ ಬೆಳ್ಳಂಬೆಳ್ಳಿಗೆ ನಡೆದಿದೆ.
ಕಲಘಟಗಿ ಕಡೆಯಿಂದ ಗಾರ್ಮೆಂಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ್ದ ಟಾಟಾ ಏಸ್ ಪ್ಯಾಸೆಂಜರ್ ವಾಹನಕ್ಕೆ ರಭಸವಾಗಿ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದ್ದು, ಮೃತ ಮಹಿಳೆ ಹಾಗೂ ಗಂಭೀರವಾಗಿ ಗಾಯಗೊಂಡವರ ಮಾಹಿತಿ ತಿಳಿದುಬರಬೇಕಿದೆ.