
ಪಬ್ಲಿಕ್ ರೈಡ್ ನ್ಯೂಸ್ :ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಜಯಲಕ್ಷ್ಮಿ ಅವರನ್ನು ರಾಜ್ಯ ಅಧ್ಯಕ್ಷರಾದ ಮಹೇಶ್ ಕುಮಾರ್ ಎಂ ಬಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ನಾಡು-ನುಡಿ, ನೆಲ -ಜಲ,ಭಾಷೆ ವಿಚಾರದಲ್ಲಿ ಯಾವುದೇ ಅನ್ಯಾಯ ಆದಲ್ಲಿ ತಾವುಗಳು ಅದರ ವಿರುದ್ಧ ಧ್ವನಿ ಎತ್ತಿ ನ್ಯಾಯ ದೊರೆಯುವಂತೆ ಮಾಡಲು ಪ್ರಮುಖ ಪಾತ್ರ ವಹಿಸಬೇಕು ಹಾಗೂ ಮಹಿಳೆಯರ ಪರವಾಗಿ ಸದಾ ಕಾಲ ಅವರ ಜೊತೆ ಇದ್ದು ಮಹಿಳೆಯರಿಗೆ ಅನ್ಯಾಯ ಹಾಗೂ ದೌರ್ಜನ್ಯಗಳು ನಡೆಯದಂತೆ ನೋಡಿಕೊಂಡು ರಾಜ್ಯಾದ್ಯಂತ ಸಂಘಟನೆ ವಿಸ್ತರಿಸುವ ಮೂಲಕ ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವ ಮೂಲಕ ತಾವುಗಳು ಸಮಾಜಮುಖಿ ಕೆಲಸಗಳನ್ನು ಮಾಡುವಂತೆ ತಿಳಿಸಿದ್ದಾರೆ.