
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಿದರಕಲ್ಲು ವಾರ್ಡ್ ನ ಚನ್ನನಾಯಕನಪಾಳ್ಯದಲ್ಲಿ ಕಳೆದ 45 ವರ್ಷಗಳಿಂದ ನಿರಂತರವಾಗಿ ಗಣೇಶ ಪ್ರತಿಷ್ಠಾಪನೆ ಮಾಡಿಕೊಂಡು ಬರುತ್ತಿರುವ ಶ್ರೀ ವಿನಾಯಕ ಮಿತ್ರಮಂಡಳಿ ಯುವಕರು ಕೈಯಲ್ಲಿ ಬಿಲ್ಲು ಬಾಣ ಹಿಡಿದು ನಿಂತಿರುವ ಬೃಹತ್ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಗ್ರಾಮದ ಜನರು ಹಾಗೂ ಅಕ್ಕಪಕ್ಕದ ಬಡಾವಣೆಗಳ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
45 ವರ್ಷಗಳಿಂದ ನಿರಂತರವಾಗಿ ಗಣೇಶನ್ನು ಪ್ರತಿಷ್ಠಾಪಿಸುತ್ತಿರುವ ಶ್ರೀ ವಿನಾಯಕ ಮಿತ್ರಮಂಡಳಿ ಯುವಕರು ಚನ್ನನಾಯಕನಪಾಳ್ಯದ ವೃತ್ತದಲ್ಲಿ ಬೃಹತ್ ಮಂಟಪ ತಯಾರಿಸಿ ರಾಮನ ಅವತಾರದಲ್ಲಿರುವ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿಐದು ದಿನಗಳ ಕಾಲ ಗಣೇಶ ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳನ್ನ ನಡೆಸಲಾಗುತ್ತದೆ.
ಎರಡನೇ ದಿನ ಸುತ್ತ ಮುತ್ತಲಿನ ಐದು ಸಾವಿರ ಜನರಿಗೆ ಅನ್ನ ಸಂತರ್ಪಣೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸಹ ಆಯೋಜನೆ ಮಾಡಲಾಗುತ್ತದೆ. ಹಬ್ಬದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಗ್ರಾಮಗಳಿಂದಲೂ ಚನ್ನನಾಯಕನಪಾಳ್ಯಕ್ಕೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ. ಐದನೇ ದಿನ ವಿವಿಧ ಬಡಾವಣೆಗಳಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ಮಾಡಲಾಗುವುದು ಎಂದು ಶ್ರೀ ವಿನಾಯಕ ಮಿತ್ರಮಂಡಳಿ ಸದಸ್ಯರು ಮಾಹಿತಿ ನೀಡಿದರು.