
ಪಬ್ಲಿಕ್ ರೈಡ್ ಹುಬ್ಬಳ್ಳಿ: ಪ್ಲೈಓವರ್ ಕಾಮಗಾರಿ ಸಂದರ್ಭದಲ್ಲಿ ಕಬ್ಬಿಣದ ರಾಡ್ ಪ್ಲೈಓವರ್ ಮೇಲಿಂದ ಎಎಸ್ಐ ಓರ್ವರ ತಲೆ ಬಿದ್ದು, ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಹಳೇ ಕೋರ್ಟ್ ಸರ್ಕಲ್ ಬಳಿ ನಡೆದಿದೆ.
ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಬಿರಾಜ್ ದಾಯಣ್ಣವರ ಎಂಬುವರೇ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ವಿವೇಕಾನಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸದಾ ಸುದ್ದಿಯಲ್ಲಿರುವ ಫ್ಲೈ ಓವರ್ ಕಾಮಗಾರಿಗಳು ಇದೀಗ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಕಂಟಕವಾಗಿದೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಕಾಮಗಾರಿಯನ್ನು ಮಾಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಪ್ಲೈಓವರ್ ಕಾಮಗಾರಿಯ ನಿರ್ಲಕ್ಷ್ಯದಿಂದಾಗಿ ಎಎಸ್ಐ ಅವರಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೊರಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಘಟನೆಗಳನ್ನು ತಡೆಯಲು ಸಂಬಂಧಿಸಿದ ಅಧಿಕಾರಿಗಳು ಏನು ಕ್ರಮ ತಗೆದುಕೊಳ್ಳತ್ತಾರೋ ಕಾದು ನೋಡಬೇಕಿದೆ.