
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ‘ಸಾರ್ವಜನಿಕರು ಅನಗತ್ಯವಾಗಿ ಖಾಸಗಿ ವಾಹನ ಬಳಸದೇ ಪ್ರತಿನಿತ್ಯದ ಪ್ರಯಾಣಕ್ಕಾಗಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಬಳಸಬೇಕು ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವುದರ ಜೊತೆಗೆ ವೈಯುಕ್ತಿಕ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ’, ಎಂದು ಶಾಸಕ ಎಸ್ ಮುನಿರಾಜು ಹೇಳಿದರು.
ನೆಲಗದರನಳ್ಳಿ ಸಮೀಪದ ಗೃಹಲಕ್ಷ್ಮಿ ಬಡಾವಣೆಯ ಮುಖ್ಯರಸ್ತೆಯಲ್ಲಿ ಬಸ್ ಶೆಲ್ಟರ್ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಪ್ರಯಾಣಿಕರು, ಮಳೆ ಬಿಸಿಲು ಎನ್ನದೇ, ರಸ್ತೆ ಬದಿಯಲ್ಲೇ ಬಸ್‌ಗಳಿಗೆ ಕಾಯುವ ಸ್ಥಿತಿ ಇದೆ. ಇದನ್ನು ಮನಗಂಡು ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಕಡೆ ಅವಶ್ಯಕತೆ ಇರುವ ಕಡೆಗಳಲ್ಲಿ ಬಸ್ ಶೆಲ್ಟರ್ ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಪ್ರಯಾಣಿಕರು ಇದರ ಸದುಪಯೋಗ ಪಡೆಯಲಿದ್ದಾರೆ’, ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ನ ಬಿಜೆಪಿ ಅಧ್ಯಕ್ಷರಾದ ನಿಸರ್ಗ ಕೆಂಪರಾಜು, ಗುತ್ತಿಗೆದಾರರಾದ ಲಿಖಿತ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.