
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ‘ಸ್ವಾತಂತ್ರ್ಯ ಪೂರ್ವದಲ್ಲಿ ಖಾಸಗಿಯಾಗಿ ನಡೆಯುತ್ತಿದ್ದ ಚೌತಿ ಸಂಭ್ರಮಕ್ಕೆ ಅಂದು ದೇಶಪ್ರೇಮಿಗಳಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಲು ಆರಂಭವಾದ ಗಣೇಶನ ಹಬ್ಬ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರ ವಹಿಸಿ, ರಾಷ್ಟ್ರೀಯ ಹಬ್ಬವಾಗಿರುವುದು ವಿಶೇಷ’, ಎಂದು ಶ್ರೀನಿವಾಸ ಮಂಜುನಾಥ ಫೌಂಡೇಶನ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಕಮಿಟಿಯ ಉಪಾಧ್ಯಕ್ಷರಾದ ಡಾ. ಎಸ್ ಮಂಜುನಾಥ್ (ಎಬಿಬಿ ಮಂಜಣ್ಣ) ಹೇಳಿದರು.
ಬಾಗಲಗುಂಟೆಯ ಮಂಜುನಾಥನಗರದ 2ನೇ ಮುಖ್ಯ ರಸ್ತೆ 4ನೇ ಅಡ್ಡರಸ್ತೆಯಲ್ಲಿ ಸಿಜಿ ಗೆಳೆಯರ ಬಳಗದ ವತಿಯಿಂದ ಪ್ರಶಾಂತ್, ರಂಜಿತ್, ರಘು ಹಾಗೂ ಸಂಗಡಿಗರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿನಾಯಕನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ದೇಶ-ವಿದೇಶಗಳಲ್ಲೂ ಜನಪ್ರಿಯಗೊಂಡಿರುವ ಗಣೇಶ ಚತುರ್ಥಿ ಇಂದು ಸಾಂಸ್ಕೃತಿಕವಾಗಿ ಮತ್ತು ಧಾರ್ಮಿಕವಾಗಿ ತುಂಬಾ ಮಹತ್ವವನ್ನು ಪಡೆದುಕೊಂಡಿದೆ’, ಎಂದು ಹೇಳಿದರು.
ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನೆರದಿದ್ದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಕರ ಮಿತ್ರ ಕೇಶವ್ ದಾಸ್, ಸಿಜಿ ಗೆಳೆಯರ ಬಳಗದ ಪದಾಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು, ಸ್ಥಳೀಯರು, ಭಕ್ತಾದಿಗಳು ಉಪಸ್ಥಿತರಿದ್ದರು.