
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಶಾಸಕರಾದ ಎಸ್ ಮುನಿರಾಜುರವರ ಮಾರ್ಗದರ್ಶನದಲ್ಲಿ ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಜೆ.ವಿ.ಎಸ್ ಸತೀಶ್ ರವರ ನೇತೃತ್ವದಲ್ಲಿ ಪೀಣ್ಯ 2ನೇ ಹಂತ ಸಮೀಪದ ಮುನಿಗಂಗಪ್ಪ ಮೈದಾನದಲ್ಲಿ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಾದ್ಯಂತ ಹಮ್ಮಿಕೊಂಡಿರುವ ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೆ.ವಿ.ಎಸ್ ಸತೀಶ್, ‘ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರ ಜೊತೆಗೆ ಉತ್ತಮ ಆಡಳಿತ ನೀಡುವ ಮೂಲಕ ವಿಶ್ವ ನಾಯಕರೆನಿಸಿಕೊಂಡಿದ್ದಾರೆ. ಹಾಗೆಯೇ ಜಾಗತಿಕ ಯುಗದಲ್ಲಿ ಯುವ ಜನತೆ ರಕ್ತದಾನದ ಮಹತ್ವದ ಮನವರಿಕೆಯನ್ನು ಮಾಡಿಕೊಳ್ಳುವ ಕಡೆಗೆ ಸಾಗಬೇಕು. ರಕ್ತದಾನ ಮಾಡುವುದರಿಂದ ಸಾವು ಬದುಕಿನ ನಡುವೆ ಹೊರಾಟ ಮಾಡುತ್ತಿರುವ ರಕ್ತದ ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸಿದಂತಾಗುತ್ತದೆ. ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದ ದಾನವಾಗಿದ್ದು ಈ ಬಗ್ಗೆ ಯುವಶಕ್ತಿ ಹೆಚ್ಚಿನ ಗಮನಹರಿಸುವ ನಿಟ್ಟಿನಲ್ಲಿ ಜಾಗೃತರಾಗಿ ಹೆಜ್ಜೆ ಇಡಬೇಕು’, ಎಂದು ಹೇಳಿದರು.
ನರೇಂದ್ರ ಮೋದಿಯವರ ಹುಟ್ಟುಹಬ್ಬದಿಂದ ಗಾಂಧಿ ಜಯಂತಿಯವರೆಗೆ ಒಂದು ತಿಂಗಳುಗಳ ಕಾಲ ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ದಾಸರಹಳ್ಳಿ ಬಿಜೆಪಿ ಯುವ ಮೋರ್ಛಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಇಂದು ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ 126 ಬ್ಲಡ್ ಯೂನಿಟ್ ಸಂಗ್ರಹವಾಗಿದೆ.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷರಾದ ಗಂಗರಾಜು, ದಾಸರಹಳ್ಳಿ ಮಂಡಲ ಬಿಜೆಪಿ ಅಧ್ಯಕ್ಷ ಸೋಮಶೇಖರ್, ರತ್ನಾ ಆಶಾ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ದಾಸರಹಳ್ಳಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಸ್ಥಳೀಯರು ಉಪಸ್ಥಿತರಿದ್ದರು.