
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರ8ಹಳ್ಳಿ: ‘ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳಿಗೆ ಮತ್ತೆ ಮರುಜೀವ ಬಂದಿದ್ದು ಈಗ ನಡೆಯುತ್ತಿರುವ ಕಾಮಗಾರಿಗಳೆಲ್ಲವೂ ನಮ್ಮ ನಾಯಕರಾದ ಆರ್ ಮಂಜುನಾಥ್ ರವರು ಶಾಸಕರಾಗಿದ್ದಾಗ ಮಂಜೂರಾತಿ ಆಗಿದ್ದ ಕೆಲಸಗಳಾಗಿದ್ದು, ಈಗ ಅಧಿಕಾರದಲ್ಲಿರದಿದ್ದರೂ ಕೂಡಾ ಸರ್ಕಾರದ ಮಟ್ಟದಿಂದ ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ತರುವ ನಿಟ್ಟಿನಲ್ಲಿ ಸತತವಾಗಿ ಶ್ರಮಿಸುತ್ತಿದ್ದಾರೆ’, ಎಂದು ಪೀಣ್ಯ ಕೈಗಾರಿಕಾ ಪ್ರದೇಶ ಹಾಗೂ ರಾಜಗೋಪಾಲನಗರ ವಾರ್ಡ್ ನ ಕಾಂಗ್ರೆಸ್ ಮುಖಂಡರಾದ ರುದ್ರೇಗೌಡ್ರು ಹೇಳಿದರು.
ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ನ ರಾಜೇಶ್ವರಿ ನಗರದ ಫ್ರೆಂಡ್ಸ್ ಸರ್ಕಲ್ ಸಮೀಪದ ರಸ್ತೆಗಳ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಗೆ ಗುಣಮಟ್ಟ ಕಾಪಾಡುವಂತೆ ಸೂಚಿಸಿ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರೇಣುಕಾ ಪ್ರಸಾದ್ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು, ಸ್ಥಳೀಯರು, ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.