
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ ದಾಸರಹಳ್ಳಿ : ಶೆಟ್ಟಿಹಳ್ಳಿ ವಾರ್ಡಿನ ಕಮಗೊಂಡನಹಳ್ಳಿಯಲ್ಲಿ ಮಾಜಿನಗರ ಸಭಾಧ್ಯಕ್ಷ ಹಾಗೂ ಕೆ ಬಿ ಸಿ ಟ್ರಸ್ಟ್ ಅಧ್ಯಕ್ಷ ಕೆಸಿ ಅಶೋಕ್ ಹಾಗೂ ಕುಟುಂಬದವರು ಹಲವಾರು ವರ್ಷಗಳಿಂದ ಶ್ರೀಮಾರಮ್ಮ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ನಡೆಸುತ್ತಿದ್ದಾರೆ. ನವರಾತ್ರಿ ಹಿನ್ನಲೆ 9 ದಿನಗಳ ಕಾಲ ದೇವಿಗೆ ವಿವಿಧ ಅಲಂಕಾರ ಮಾಡಲಾಗಿತ್ತು.
ನವರಾತ್ರಿ ಉತ್ಸವದ ಕೊನೆಯ ದಿನವಾದ ಇಂದು ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೂ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಲವಾರು ಸ್ಥಳೀಯ ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾದರು,