
ಧಾರವಾಡ
ಛಾಯಾಚಿತ್ರ ಶೀರ್ಷಿಕೆ ಅಡಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಧಾರವಾಡ ಜಿಲ್ಲೆಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥ ಯಾತ್ರೆಯನ್ನು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಅವರು ಸ್ವಾಗತಿಸಿ, ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬಂದ ರಥ ಯಾತ್ರೆಯನ್ನು ಡಿಸಿ ದಿವ್ಯಫ್ರಭು, ಕರ್ನಾಟಕ ವಿದ್ಯಾ ರ್ವಧಕ ಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಚಂದ್ರಕಾಂತ ಬೆಲ್ಲದ ಅವರ ನೇತೃತ್ವದಲ್ಲಿ ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಸ್ವಾಗತಿಸಲಾಯಿತ್ತು. ಬಳಿಕ ಜಿಲ್ಲಾಧಿಕಾರಿ ಆವರಣದಲ್ಲಿ ಜ್ಯೋತಿ ರಥಕ್ಕೆ ಮಂಗಳರಾತಿ ಮಾಡಲಾಯಿತು. ನಂತರ ಜಿಲ್ಲೆಯಲ್ಲಿ ರಥ ಸಂಚಾರಕ್ಕೆ ಡಿಸಿ ದಿವ್ಯ ಫ್ರಭು ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲೆಯಲ್ಲಿ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದು, ಪುಷ್ಪಾರ್ಚಣೆ ಮಾಡಿದರು. ಮತ್ತು ಕಲಾ ತಂಡಗಳು ಭಾಗವಹಿಸಿದ್ದವು.