
ಧಾರವಾಡ
ಎಸ್ಸಿ ಎಸ್ಟಿ ಒಳ ಮೀಸಲಾತಿ ಜಾರಿಯ ವಿಳಂಬ ನೀತಿಯನ್ನು ಖಂಡಿಸಿ ಹಾಗೂ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ, ಧಾರವಾಡದಲ್ಲಿ ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಯಿತು.
ಕರ್ನಾಟಕ ಮಾದೀಗ ದಂಡೋರ ಸಂಘಟನೆ ನೇತೃತ್ವದಲ್ಲಿ ಬೈಕ್ ರ್ಯಾಲಿ ಮೂಲಕ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಆಗಸ್ಟ್1 ಸರ್ವೋಚ್ಚ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣ ಪೀಠವು, ಎಸ್.ಸಿ. ಎಸ್.ಟಿ. ಮೀಸಲಾತಿಯಲ್ಲಿನ ಒಳಮೀಸಲಾತಿ ನೀಡುವುದು ರಾಜ್ಯ ಸರಕಾರಕ್ಕೆ ಹಕ್ಕಿದೆ ಎಂದು ಪೀಠವು ತೀರ್ಪು ನೀಡಿದೆ.
ಆದರೆ ಆಡಳಿತಕ್ಕೆ ಬರುವ ಸರ್ಕಾರಗಳು ಜಾರಿಗೆ ಜಾರಿ ಮಾಡುವುದರಲ್ಲಿ ವಿಫಲವಾಗುತ್ತಿವೆ. ಒಳಮೀಸಲಾತಿಗಾಗಿ ಕರ್ನಾಟಕದಲ್ಲಿ ಮೂರು ದತಕಗಳ ನಿರಂತರ ಹೋರಾಟ ನಡೆದಿದೆ. ಒಳಮೀಸಲಾತಿ ಹೋರಾಟದ ಬಗ್ಗೆ ಪ್ರಸ್ತುತ ಸರಕಾರವು ಕೇವಲ ಸಹಾನುಭೂತಿ ತೋರಿಸುತ್ತದೆ ನಿಜ. ಸಹಾನಬೂತಿ ಕ್ರಿಯಾತ್ಮಕ ರೂಪ ಪಡೆಯದಿದ್ದರೆ ಅಪ್ರಯೋಜಕ. ಹಾಗಾಗಿ ಈ ಕೂಡಲೇ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಸ್ಸಿ ಎಸ್ಟಿ ಒಳ ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಕರೆ ಕಡೆಗೆ ನಾವು ಚಿಂತಿಸಬೇಕಾಗುತ್ತದೆ ಎಂದು ಖಡಕ್‌ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು.