
ಪಬ್ಲಿಕ್ ರೈಡ್ ಧಾರವಾಡ
ಧಾರವಾಡ ನಗರದಲ್ಲಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಗಾಂಜಾ ಗಿರಾಕಿಗಳಿಗೆ ಬಿಸಿ ಮುಟ್ಟಿಸುತ್ತಿದ್ದು, ಇತ್ತ ಗ್ರಾಮೀಣ ಭಾಗದಲ್ಲೂ ಸಿಇಎನ್ ಠಾಣೆಯ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸೇರಿ ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಹಿಂಬದಿಯಲ್ಲಿ ಬೆಳೆದಿದ್ದ ಗಾಂಜಾ ಸಸಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದ ಮನೆಯೊಂದರ ಹಿಂಬದಿಯಲ್ಲಿ ಗಾಂಜಾ ಸಸಿ ಬೆಳೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಹಾಗೂ ಗ್ರಾಮೀಣ ಠಾಣೆ ಪೊಲೀಸರು, 7ಕೆಜಿ 455 ಗ್ರಾಂ ಹಸಿ ಗಾಂಜಾ ಸಸಿಯನ್ನು ಸೀಜ್ ಮಾಡಿದ್ದಾರೆ.
ಇನ್ನೂ ಸಿಇಎನ್ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆಗೆ ಧಾರವಾಡ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಸೇರಿ ಹಿರಿಯ ಪೊಲೀಸ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಹಸಿ ಗಾಂಜಾ ಬೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಯಜಮಾನನ ವಿರುದ್ಧ ಸಿಇಎನ್ ಠಾಣೆಯ ಪೊಲೀಸರು ಕಾನೂನು ಕ್ರಮ ಜಾರಿ ಮಾಡಿದ್ದಾರೆ.