
ಹುಬ್ಬಳ್ಳಿ
ನಗರದ ಗೋಕುಲ್ ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯಲ್ಲಿ ಹುಚ್ಚು ನಾಯಿಯೊಂದು ಸಾರ್ವಜನಿಕರ ಮೇಲೆ ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿನಿಯರು ಸೇರಿದಂತೆ 20 ಕ್ಕೂ ಹೆಚ್ಚು ಜನರು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಾಯಂಕಾಲ ನಡೆದಿದೆ.
ಹೊಸ ಬಸ್ ನಿಲ್ದಾಣದ ಬಳಿ ಸುಮಾರಿಗೆ ಸಾರ್ವಜನಿಕರು ಓಡಾಡುತ್ತಿದ್ದ ರಸ್ತೆಯಲ್ಲಿ ಬಂದ ಹುಚ್ಚು ನಾಯಿ ಕಂಡ ಕಂಡವರ ಮೇಲೆ ದಾಳಿಯನ್ನು ಮಾಡಿ.ಕೈ ಕಾಲು ಕಚ್ಚಿದೆ ಇದರಲ್ಲಿ ಬಹುತೇಕ ಮಹಿಳೆಯರು ನಾಯಿ ದಾಳಿಗೆ ಒಳಗಾಗಿದ್ದು ಸದ್ಯ ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಹಿಂದೆ ಕೂಡಾ ಇಲ್ಲಿನ ಸಾರ್ವಜನಿಕರು ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂದು ಸಾಕಷ್ಟು ಬಾರಿ ಪಾಲಿಕೆಗೆ ದೂರು ನೀಡಿದರೂ ಕೂಡಾ ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷದಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.