
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ಕ್ಷೇತ್ರದಲ್ಲಿ ಸಾರ್ವಜನಿಕರ ಹಿತದೃಷ್ಟಿಯ ಉದ್ದೇಶದಿಂದ ವಿವಿಧ ಸ್ಥಳಗಳಲ್ಲಿ ಶೌಚಾಲಯಗಳನ್ನು ಆದ್ಯತೆಯ ಮೇರೆಗೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು’, ಎಂದು ಶಾಸಕ ಎಸ್ ಮುನಿರಾಜು ಹೇಳಿದರು.
ಕ್ಷೇತ್ರದ ಬಾಗಲಗುಂಟೆ ವಾರ್ಡ್ ನ ಎಂ.ಇ.ಐ ಗ್ರೌಂಡ್ ನಲ್ಲಿ ಶೌಚಾಲಯ ಹಾಗೂ ಸಂಪ್ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದೇ ವೇಳೆ ಆಟದ ಮೈದಾನದಲ್ಲಿ ಹಾಕಲಾಗಿರುವ ಆಟದ ಉಪಕರಣಗಳನ್ನು ಶೀಘ್ರವೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಎಂಇಐ ಆಟದ ಮೈದಾನದಲ್ಲಿ ವಾಯು ವಿಹಾರಿಗಳಿಗೆ ಹಾಗೂ ಕಾರ್ಯಕ್ರಮದ ನಿಮಿತ್ತ ಭಾಗವಹಿಸುವ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು ಆರೋಗ್ಯ ಹಾಗೂ ನೈರ್ಮಲ್ಯ ಕಾಪಾಡಲು ಸಹಕಾರಿಯಾಗಲಿವೆ.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ ಕೃಷ್ಣಮೂರ್ತಿ, ದಾಸರಹಳ್ಳಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ಹೆಚ್ ರಾಜು, ದಾಸರಹಳ್ಳಿ ಮಂಡಲ ಕೋಶಾಧ್ಯಕ್ಷ ಬಿ.ಎಂ ನಾರಾಯಣ್, ರಾಘು ಸೂರ್ಯ, ಬಾಗಲಗುಂಟೆ ವಾರ್ಡ್ ಬಿಜೆಪಿ ಮಾಜಿ ಅಧ್ಯಕ್ಷರಾದ ಬಿ.ಎಂ ಕೃಷ್ಣ, ಗಣೇಶ್ ರಾವ್, ಎಇಇ ನರಸಿಂಹಮೂರ್ತಿ, ಎಇ ಪ್ರವೀಣ್, ಗುತ್ತಿಗೆದಾರರಾದ ಮಾಧವ್ ರೆಡ್ಡಿ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು, ಸ್ಥಳೀಯರು, ಸಾರ್ವಜನಿಕರು ಉಪಸ್ಥಿತರಿದ್ದರು.