
ಪಬ್ಲಿಕ್ ರೈಡ್ ನ್ಯೂಸ್ ಹುಬ್ಬಳ್ಳಿ
ಮನೆಯ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್. ಎಂ. ಕೃಷ್ಣನಗರದಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ. ಸಾಜೀದಾ ನಾಲಬಂದ (38) ಕೊಲೆಯಾದ ಮಹಿಳೆ. ಅವರ ಪತಿ ಮಹ್ಮದ್ ಹನೀಫ್ ಗಾಯಗೊಂಡಿದ್ದು, ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈದುನ ನಾಸೀರ್ ನಾಲಬಂದ ಕೊಲೆ ಮಾಡಿದ ಆರೋಪಿ ಆಗಿದ್ದಾನೆಂದು ಹೇಳಲಾಗುತ್ತಿದೆ. ಮನೆಯಲ್ಲಿ ಅಣ್ಣ, ತಮ್ಮ ಅತ್ತಿಗೆ ಮೂವರು ವಾಸವಾಗಿದ್ದರು. ಆಗಾಗ ಅವರ ನಡುವೆ ಜಗಳಗಳು ಆಗುತ್ತಿದ್ದವಂತೆ.
ಭಾನುವಾರ ಸಹ ಜಗಳ ನಡೆದಿದ್ದು, ಅದು ವಿಕೋಪಕ್ಕೆ ಹೋದ ಪರಿಣಾಮ ಮೈದುನ ಅತ್ತಿಗೆಗೆ ಚಾಕು ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ಸಾಜೀದಾ ಅವರನ್ನು ಕಿಮ್ಸ್ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನೂ ಘಟನೆ ಮಾಹಿತಿಯ ಮೇರೆಗೆ ಡಿಸಿಪಿ ಮಹಾನಿಂಗ ನಂದಗಾವಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.