
ಪಬ್ಲಿಕ್ ರೈಡ್ ಧಾರವಾಡ
ಧಾರವಾಡದ ವಿದ್ಯಾಗಿರಿ ಪೊಲೀಸ್ ಸ್ಟೇಶನ್ ವ್ಯಾಪ್ತಿಯಲ್ಲಿ ಸಾರ್ವುನಿಕ ಸ್ಥಳಗಳಲ್ಲಿ ಕಾನೂನು ಉಲ್ಲಂಘನೆ ಮಾಡಯತ್ತಿದ್ದ ಯುವಕರಿಗೆ ಪೊಲೀಸರು ಬಿಸಿ ಮುಟ್ಟಿಸುವ ಮೂಲಕ ಏರಿಯಾ ಡಾಮಿನೇಷನ್ ಭಾನುವಾರ ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ಮಧ್ಯಪಾನ ಸೇರಿದಂತೆ ಸಂಚಾರಿ ನಿಯಮ ಉಲ್ಲಂಘಿಸುತ್ತಿದ್ದ 120 ಕ್ಕೂ ಹೆಚ್ಚು ಯುವಕರನ್ನು ಕರೆ ತೆಂದು. ಅವರನ್ನು ವಿಂಗಡಿಸಿ ದಂಡಾಸ್ತ್ರ ಪ್ರಯೋಗ ಮಾಡುವ ಮೂಲಕ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೈಕ್ ಮೇಲೆ ನಂಬರ್ ಪ್ಲೇಟ್ ಇಲ್ಲದೆ ಸಂಚಾರ ಮಾಡುವವರು ಹಾಗೂ ಈ ಹಿಂದೆ ಯಾವುದಾದರೂ ಪ್ರಕರಣಗಳಲ್ಲಿ ತೊಡಗಿಸಿಕೊಂಡವರನ್ನು ಸಿಕ್ಕಿದಾಗ ವಿಚಾರಿಸಿ ತಪ್ಪಿತಸ್ಥರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಂಡು ಸರಿಯಾಗಿ ಬಿಸಿ ತಾಕಿಸಲಾಗಿದೆ. ಈ ಸಂದರ್ಭದಲ್ಲಿ ಧಾರವಾಡ ಎಸಿಪಿ ಪ್ರಶಾಂತ್ ಸಿದ್ದನಗೌಡರ. ಧಾರವಾಡ ಉಪನಗರ ಠಾಣೆ ಇನ್ಸಪೆಕ್ಟರ್ ದಯಾನಂದ್ ಶೇಗುಣಸಿ ಬಾಬು, ಪಿಎಸ್ ಐ ಪ್ರಮೋದ್ ಸೇರಿ ಬಾಬು ಸೇರಿ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು..