
ಪಬ್ಲಿಕ್ ರೈಡ್ ಧಾರವಾಡ
ಧಾರವಾಡದಿಂದ ಬೆಳಗಾವಿ ಕಡೆಗೆ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತೆರಳುತ್ತಿದ್ದ ಕ್ಯಾಂಟರ್ ವಾಹನಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸರಕು ಸಮೇತ ವಾಹನ ಸುಟ್ಟು ಕರಕಲಾದ ಘಟನೆ ಧಾರವಾಡದ ವಿನಯ ಕುಲಕರ್ಣಿ ಡೈರಿ ಹತ್ತಿರ ಸಂಭಚಿಸಿದೆ.
ಹತ್ತಿ ಬೀಜವನ್ನ ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಬೆಂಕಿ ತಗುಲಿದ್ದು, ಬೆಂಕಿ ಹೆಚ್ಚಾಗುತ್ತಿದಂತೆ ವಾಹನ ನಿಲ್ಲಿಸಿ ಕ್ಲೀನರ್ ಮತ್ತು ಚಾಲಕ ಕೆಳಗಿಳಿದು ಪ್ರಾಣವುಳಿಸಿಕೊಂಡಿದ್ದಾರೆ. ಇನ್ನೂ ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ಪಟ್ಟು ಕೊನೆಗೆ ಯಶಸ್ವಿಯಾಗಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.