
ಪಬ್ಲಿಕ್ ರೈಡ್ ಧಾರವಾಡ
ಹರೆಯದ ಯುವಕನೋರ್ವ ಮರದ ಕೊಂಬೆಗೆ ನೇಣು ಬಿಗಿದುಕೊಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಹೊರವಲಯದ ಯಾದವಾಡ ರಸ್ತೆಯಲ್ಲಿಂದ ನಡೆದಿದೆ.
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ 21 ವಯಸ್ಸಿನ ಹರೆಯದ ಯುವಕನೋರ್ವ ಭೀಮಪ್ಪ ಮಸೂತಿ ಎಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ಇನ್ನೂ ತಿಳಿದು ಬರಬೇಕಾಗಿದೆ. ಯುವಕ ಅಲ್ಪಮಟ್ಟದಲ್ಲಿ ಮದ್ಯ ಸೇವಿಸುತ್ತಿದ್ದ ಎಂದು ಗೊತ್ತಾಗಿದೆ. ಸದ್ಯ ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಬಳಿಕವಷ್ಟೇ ಯುವಕನ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.