
ಪಬ್ಲಿಕ್ ರೈಡ್ ಧಾರವಾಡ
ಓಮಿನಿ ಕಾರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಇನ್ನೋರ್ವನಿಗೆ ಸಣ್ಣ ಪುಟ್ಟ ಗಾಯವಾದ ಘಟನೆ ಧಾರವಾಡದ ಆಕಾಶವಾಣಿ ಬಳಿ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಓಮಿನಿ ಕಾರ್ ರಸ್ತೆಯಲ್ಲಿ ಅಡ್ಡ ಬಂದ ನಾಯಿಯೊಂದನ್ನು ರಕ್ಷಿಸಲು ಮುಂದಾದ ವೇಳೆ ಕಾರ್ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದಾಗಿ ನಿಯಂತ್ರಣ ತಪ್ಪಿ ಕಾರ್ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಓಮಿನಿ ಕಾರಿನ ಚಾಲಕ ಹಾಗೂ ಮತ್ತೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಕೂಡಲೇ ಸ್ಥಳೀಯರು ಸೇರಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಇನ್ನು ಕಾರ್ ಡಿಕ್ಕಿಹೊಡೆದ ರಭಸಕ್ಕೆ ಓಮನಿ ಕಾರ್ ಮುಂಭಾಗ ಜಖಂ ಆಗಿದೆ, ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯ ಬಳಿಕ ಗಾಯಾಳು ಹೆಸರು ತಿಳಿದು ಬರಬೇಕಾಗಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.