
ಸಂಯೋಜನೆ ಹೆಸರಿನಲ್ಲಿ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಹಾಗೂ ಈ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹಿಸಿ, ಧಾರವಾಡದಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ನಗರದ ವಿವೇಕಾನಂದ ವೃತದದಲ್ಲಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೂರಾರು ವಿದ್ಯಾರ್ಥಿಗಳು, ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದ್ದು, ಇದು ಬಡ ಜನರ ಶಿಕ್ಷಣ ಕಸಿದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣ ನೀಡುವುದು ಆಯಾ ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ಆದರೆ ನಮ್ಮ ರಾಜ್ಯದಲ್ಲಿ ಕಡಿಮೆ ಹಾಜರಾತಿ ನೆಪ್ಪವೊಡ್ಡಿ ಬಡ ಜನರಿಗೆ ಶಿಕ್ಷಣ ನೀಡುವ ಶಾಲೆಗಳನ್ನೇ ಮುಚ್ಚುವ ಕೆಲಸ ಸರ್ಕಾರ ಮಾಡುತ್ತಿದೆ. ಕಡಿಮೆ ಹಾಜರಾತಿಗೆ ಶಿಕ್ಷಣ ಇಲಾಖೆಯ ನಿರ್ಲಕ್ಷ ಕಾರಣ ಎಂಬುವುದನ್ನು ಸರ್ಕಾರ ಮರೆತು ಬಿಟ್ಟಿದೆ. ಈ ಕೂಡಲೇ ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾಡಿ, ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಈಗ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟ್ಟಿರುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲಾದಲ್ಲಿ ರಾಜ್ಯವ್ಯಾಪಿ ಇದರ ಬಗ್ಗೆ ಸರ್ಕಾರದ ವಿರುದ್ಧ ಬೀದಿಗೆ ಇಳಿಯ ಬೇಕಾಗುತ್ತದೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದರು.