
ಹುಬ್ಬಳ್ಳಿ: ರಾಷ್ಟ್ತ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ರಾಯನಾಳ ಸೇತುವೆ ಬಳಿ ನಡೆದಿದೆ.
ರಭಸವಾಗಿ ಬೈಕ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿದ್ದು, ಬೈಕ್ ಸವಾರನ ಮಾಹಿತಿ ಇನ್ನು ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಠಾಣೆಯ ಎಸಿಪಿ ಪ್ರಶಾಂತ ಸಿದ್ಧನಗೌಡ ಬೇಟಿ ನೀಡಿ ಪರಿಶೀಲಿಸಿದ್ದಾರೆ.ತನಿಖೆಯ ನಂತರ ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ.
ವರದಿ ಸಂತೋಷ ಮೆದಾರ ಹುಬ್ಬಳ್ಳಿ