
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೇಂದ್ರ ಕಾರಾಗೃಹ, ಸಾಧನಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಹಾಗೂ ಧಾರವಾಡ ಎಮ್ಮಿಕೇರಿಯ ಎಂಜಲ್ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ, ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಮೂರು ತಿಂಗಳ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು.
ಧಾರವಾಡ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಜರೀನಾ ಅವರು ದೀಪ ಬೆಳಗಿಸುವುದರೊಂದಿಗೆ ಶಿಬಿರ ಚಾಲನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಕಾರಾಗೃಹದಲ್ಲಿರುವ ಮಹಿಳಾ ಬಂಧಿಗಳಿಗೆ ಬ್ಯೂಟಿ ಪಾರ್ಲರ್ ತರಬೇತಿ ಆಯೋಜಿಸಿದ ಸಂಘಟಕರಿಗೆ ಅಭಿನಂದನೆ ಸಲ್ಲಿಸಿದರು.
ಹಾಗೂ ಮಹಿಳಾ ಬಂಧಿಗಳು ಈ ತರಬೇತಿ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು. ಇನ್ನೂ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ, ಕೇಂದ್ರ ಕಾರಾಗೃಹದ ಅಧೀಕ್ಷಕ ಪಿ. ಮಹದೇವ ನಾಯ್ಕ, ಹಾಗೂ ಉಪ ಅಧೀಕ್ಷರು ನಿರ್ಮಲಾ ಬಿ.ಆರ್. ಅನೇಕ ಗಣ್ಯರು ಉಪಸ್ಥಿತರಿದ್ದರು.