April 16, 2025

ಪಬ್ಲಿಕ್ ರೈಡ್ ಧಾರವಾಡ

ಧಾರವಾಡ ಜಿಲ್ಲೆಯ ಐತಿಹಾಸಿಕ ಮಠಗಳಲ್ಲಿವೊಂದಾದ ಪ್ರಸಿದ್ಧ ಶ್ರೀ ಮುರುಘಾಮಠದ ರಥೋತ್ಸವವು ಇದೇ ಬರೋ ಫೆ.3ರಂದು ಜರುಗಲಿದೆ ಎಂದು ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಯವರು ವಿವರಿಸಿದರು. ‌

ಈ ಕುರಿತು ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡ ಸ್ವಾಮೀಜಿಗಳು, ಜಾತ್ರಾ ಮಹೋತ್ಸವದ ಅಂಗವಾಗಿ ಮುರುಘಾಮಠದಲ್ಲಿ ಜ.30 ರಿಂದ ಫೆ.3ರ ವರೆಗೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಫೆ.3 ರಂದು ಮುರುಘೇಂದ್ರ ಮಹಾಶಿವಯೋಗಿಗಳ ಅದ್ಧೂರಿ ರಥೋತ್ಸವ ಜರುಗಲಿದೆ. ಮುಂಡರಗಿಯ ಡಾ.ಅನ್ನದಾನೀಶ್ವರ ಮಹಾಸ್ವಾಮಿಗಳು ರಥೋತ್ಸವಕ್ಕೆ ಚಾಲನೆ ನೀಡುವರು. ಈ ಜಾತ್ರಾ ಮಹೋತ್ಸವದಲ್ಲಿ ಹಲವು ಪೀಠಾಧಿಪತಿಗಳು, ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು‌ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!