
ಧಾರವಾಡದ ಜಿಲ್ಲಾ ನ್ಯಾಯಾಲಯದ ವಿಶೇಷ ಸಿಬಿಐ ಕೋರ್ಟ್‌ಗೆ ಹುಸಿ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಬಾಂಬ್ ನಿಷ್ಕ್ರೀಯ ದಳದವರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.
ಫಾರೆನರ್ಸ್ ರಿಜಿನಲ್ ರಿಜಿಸ್ಟ್ರೇಶನ್ ಆಫೀಸಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ ಮುಖಾಂತರ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ, ಪೊಲೀಸರು ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದವರನ್ನು ಕರೆಯಿಸಿ ತಪಾಸಣೆ ನಡೆಸಿದ್ದರು. ಹುಸಿ ಬೆದರಿಕೆಯ ಮೇಲ್ ಬಂದಿದ್ದರಿಂದ ನ್ಯಾಯಾಲಯದವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದರು.
ಆ ಮಾಹಿತಿ ಆಧಾರದ ಮೇಲೆ ಪೊಲೀಸರು ತಪಾಸಣೆ ನಡೆಸಿದರು. ಕೋರ್ಟ್ ಹಾಲ್‌ನಲ್ಲಿ ಯಾವುದೇ ಸ್ಪೋಟಕ ಅಥವಾ ಇನ್ನಿತರೆ ವಸ್ತುಗಳು ಸಿಕ್ಕಿಲ್ಲ. ಇದೊಂದು ಸುಳ್ಳು ಬೆದರಿಕೆ ಮೇಲ್ ಇರಬಹುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.