January 29, 2026

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಯು ಮಾರ್ಚ್ 22ರಿಂದ ಆರಂಭವಾಗಲಿದ್ದು, ಮೊದಲ 17 ದಿನ ನಡೆಯಲಿರುವ 21 ಪಂದ್ಯಗಳ ವೇಳಾಪಟ್ಟಿಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಗುರುವಾರ ಬಿಡುಗಡೆ ಮಾಡಿದೆ.

ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು (ಆರ್‌ಸಿಬಿ) ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಉದ್ಘಾಟನಾ ಪಂದ್ಯದಲ್ಲೇ ಮಹೇಂದ್ರ ಸಿಂಗ ಧೋನಿ ಮತ್ತು ವಿರಾಟ್ ಕೊಹ್ಲಿ ಮುಖಾಮುಖಿಯಾಗುವರು. ಪ್ರಕಟಗೊಂಡ ವೇಳಾಪಟ್ಟಿಯಲ್ಲಿ ಆರ್‌ಸಿಬಿ ತಂಡವು ಬೆಂಗಳೂರಿನಲ್ಲಿ ಮೂರು ಪಂದ್ಯ ಸೇರಿದಂತೆ ಒಟ್ಟು ಐದು ಪಂದ್ಯಗಳನ್ನು ಆಡಲಿದೆ.

ಮಾರ್ಚ್ 22ರಿಂದ ಏ.7ರವರೆಗೆ ಪ್ರಕಟಿಸಲಾದ ಈ ವೇಳಾಪಟ್ಟಿ ತಾತ್ಕಾಲಿಕವಾಗಿದ್ದು, ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಪರಿಷ್ಕರಿಸುವ ಸಾಧ್ಯತೆಯೂ ಇದೆ.

Leave a Reply

Your email address will not be published. Required fields are marked *

error: Content is protected !!