
ಪಬ್ಲಿಕ್ ರೈಡ್ ಕಲಬುರ್ಗಿ
ಕಲಬುರ್ಗಿ ನಗರದಲ್ಲಿನ ಜಿಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ರೋಗಿ ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಜಮ್ ಜಮ್ ಕಾಲೋನಿಯ ಡೆಕ್ಕನ್ ಕಾಲೇಜು ಹತ್ತಿರದ ನಿವಾಸಿ ಸೈಯದ್ ಅಝರುದ್ದೀನ್ (33) ಆತ್ಮಹತ್ಯೆಗೈದ ವ್ಯಕ್ತಿ. ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.ಆಸ್ಪತ್ರೆಯ ವೈದ್ಯರು ಮತ್ತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.