
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯ,ದಾಸರಹಳ್ಳಿ: ಅಹಿಂದ ಹಕ್ಕುಗಳ ಹೋರಾಟ ವೇದಿಕೆ ಹಾಗೂ ಮೂಲನಿವಾಸಿ ಅಂಬೇಡ್ಕರ್ ಸೇನೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ರಾಜಗೋಪಾಲನಗರದ ಅಂಬಿ ಸರ್ಕಲ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಹಿಂದ ಹಕ್ಕುಗಳ ಹೋರಾಟ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ ಅಂಜನಪ್ಪ ಹಾಗೂ ಮೂಲನಿವಾಸಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ಮಹಿಳಾ ರಾಜ್ಯಾಧ್ಯಕ್ಷರಾದ ಪ್ರಮೀಳಾರವರ ರವರ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ರಾಜ್ಯ ಜೆಡಿಎಸ್ ಹಿರಿಯ ಉಪಾಧ್ಯಕ್ಷ ಅಂದಾನಪ್ಪ, ಮುಖ್ಯ ಅತಿಥಿಗಳಾಗಿ ರಾಜಗೋಪಾಲನಗರ ವಾರ್ಡ್ ನ ಕಾಂಗ್ರೆಸ್ ಮುಖಂಡರು ಹಾಗೂ ಸಹಾಯ ಹಸ್ತ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರಾದ ರುದ್ರೇಗೌಡ್ರು, ದಾಸರಹಳ್ಳಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡಾ. ಜಿ ಹನುಮಂತರಾಜು. ಸಂಗನ ಬಸಪ್ಪ ಬಿರಾದಾರ್, ದಾಸರಹಳ್ಳಿ ಕಾಂಗ್ರೆಸ್ ಮುಖಂಡ ಧನಂಜಯ್ ಗೌಡ, ಹಿಂದೂ ಜಾಗೃತಿ ಸೇನೆಯ ಹರೀಶ್ ಗೌಡ, ರವರು ಭಾಗವಹಿಸಿದ್ದರು.
ಇದೇ ವೇಳೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವೇದಿಕೆಯಲ್ಲಿ ಇಬ್ಬರು ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಪೌರಕಾರ್ಮಿಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ನಂತರ ಹಲವಾರು ಮಹಿಳೆಯರಿಗೆ ಸೀರೆ ವಿತರಿಸಲಾಯಿತು.
ಹಲವಾರು ಮುಖಂಡರು, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.