
ಪಬ್ಲಿಕ್ ರೈಡ್ ಧಾರವಾಡ
ಧಾರವಾಡದ ಹಿರಿಯ ಸಾಹಿತಿ, ಏಕೀಕರಣದ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸಿದ್ದ ಡಾ. ಪಂಚಾಕ್ಷರಯ್ಯ ಹಿರೇಮಠ ಅವರು ಕಳೆದ ಶುಕ್ರವಾರ ತಡ ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದು, ಶನಿವಾರ ಮುಂಜಾನೆ ಜಿಲ್ಲಾಧಿಕಾರಿಗಳಾದ ದಿವ್ಯ ಫ್ರಭ ಅವರು ನಿವಾಸಕ್ಕೆ ಭೇಟಿ ನೀಡಿ ಜಿಲ್ಲಾಡಳಿತದಿಂದ ಗೌರವಾರ್ಪಣೆ ಮಾಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಶನಿವಾರ ಬೆಳಿಗ್ಗೆ ಅವರ ಮನೆಗೆ ಭೇಟಿ ನೀಡಿ, ಮೃತರ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತದ ಪರವಾಗಿ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಮೃತರ ಪತ್ನಿ ಶಾಂತಾದೇವಿ, ಪುತ್ರರಾದ ಜಯದೇವ, ಮೃತ್ಯುಂಜಯ ಮತ್ತು ಪುತ್ರಿ ವಿಜಯಶ್ರೀ ಅವರಿಗೆ ಜಿಲ್ಲಾಧಿಕಾರಿಗಳು ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಾಜಿ ಮೇಯರ್ ಈರೇಶ ಅಂಚಟಗೇರಿ, ಡಾ.ಬಸವರಾಜ ಕಟ್ಟಿಮನಿ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ, ಮಕ್ಕಳ ವೈದ್ಯ ಅರುಣ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.