
ಧಾರವಾಡ
ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೈಕ್ ಮೇಲೆ ತೆರಳುತ್ತಿದ್ದ ಬೈಕ್ ಸವಾರನಿಗೆ ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ, ಧಾರವಾಡ ಹೊರವಲಯದ ಹೊಯ್ಸಳ ನಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಧಾರವಾಡದ ಹೊಯ್ಸಳ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಇನ್ನೂ ಬೈಕ್ ಸವಾರ ಅಪರಿಚಿತ ವಾಹನ ಹಿಟ್ ಆ್ಯಂಡ್ ರನ್ನಗೆ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೈಕ್ ಸವಾರನ ಹೆಸರು ಇನ್ನೂ ತಿಳಿದು ಬದಿಲ್ಲ. Ka25 , u 9712 ಧಾರವಾಡ ನೋಂದಣಿ ಬೈಕನಲ್ಲಿ ಬೈಕ ಸವಾರ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇನ್ನೂ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಕಾನೂನು ಕ್ರಮ ಕೈಗೊಂಡಿದ್ದಾರೆ.