
ಹುಬ್ಬಳ್ಳಿ
ಇಷ್ಟು ದಿನ ಒಬ್ಬಂಟಿ ಮಹಿಳೆಯರು ಸೇರಿ ಮನೆ ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮ ಕಳ್ಳರು ಈಗ ಎಂಎಲ್‌ಎ ಜನ ಸಂಪರ್ಕ ಕಾರ್ಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿಸಿ ಟಿವಿ ಕದ್ದುಕೊಂಡು ಹೋಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಜನ ಸಂಪರ್ಕ ಕಾರ್ಯಾಲಯದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.
ಜೆ.ಸಿ.ನಗರದ ಟೌನ್ಹಾಲ್ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿನ ಟಿವಿವನ್ನು ಕಳ್ಳತನ ಮಾಡಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಸರ್ಕಾರಿ ರಜೆ ದಿನವಾದ ರವಿವಾರದಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.