
ಪಬ್ಲಿಕ್ ರೈಡ್ ಹುಬ್ಬಳ್ಳಿ
ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ.
ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕರ್ನಾಟಕ ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ಸೂಚಿಸಿಲ್ಲ. ಅಲ್ಲದೇ ಹುಬ್ಬಳ್ಳಿ ಧಾರವಾಡ ಆಟೋ ಚಾಲಕರು ಬಂದ್ ಗೆ ಬೆಂಬಲ ನೀಡದೇ ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನೂ ಅಂಗಡಿ, ಮುಂಗಟ್ಟುಗಳು ಎಂದಿನಂತೆ ಓಪನ್ ಆಗಿದ್ದು, ಸಹಜ ಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ಮುಂದುವರೆದಿದ್ದು, ಹುಬ್ಬಳ್ಳಿಯಲ್ಲಿ ಬಂದ್ ಗೆ ಬೆಂಬಲ ಇಲ್ಲದಂತಾಗಿದೆ.