
ಧಾರವಾಡ
ಪರಿಷ್ಕೃತ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ಅನಿರ್ಧಿಷ್ಟಾವಧಿ ಧರಣಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.
ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಅಧೀನ ಮಾಹಾ ವಿದ್ಯಾಲಯಗಳ ಸಹಾಯಕ/ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕವಿವಿ ಆಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 2022ರಲ್ಲಿ ಕವಿವಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ನಿರ್ಣಯ ಕೈಗೊಂಡಿತ್ತು.
28 ಸಾವಿರ ಇರುವ ವೇತನವನ್ನು 40 ಸಾವಿರಕ್ಕೆ ಹೆಚ್ಚಳ ಮಾಡಿ ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಸಹ ತೆಗೆದುಕೊಳ್ಳಲಾಗಿತ್ತು. ಆ ನಿರ್ಧಾರ ಇದುವರೆಗೂ ಅನುಷ್ಠಾನಗೊಂಡಿಲ್ಲ. ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು ಇಲ್ಲದೇ ಹೋದರೆ ಅನಿರ್ಧಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಎಚ್ಚರಿಕೆ ನೀಡಿದರು.