
ಧಾರವಾಡ
ಕಳೆದ ದಿನ ಮಂಗಳವಾರದಂದು ಮಳೆ ಗಾಳಿಗೆ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಕಾಡನಕೊಪ್ಪ ಗ್ರಾಮ ಹೊರವಲಯದ ಈ ದುರ್ಘಟನೆ ನಡೆದಿದೆ. ಮಳೆ-ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿದ್ದು, ಓರ್ವನಿಗೆ ಗಾಯವಾಗಿದೆ. ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52) ಹಾಗೂ ಹಳೇ ಹುಬ್ಬಳ್ಳಿ ನೂರಾಣಿ ಪ್ಲಾಟ್ ನಿವಾಸಿ ರಫಿಕಸಾಬ್ ಚನ್ನಾಪುರ (50) ಮೃತ ವ್ಯಕ್ತಿಗಳಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಮಹಾಂತೇಶ ಚವರಗುಡ್ಡ ಎಂಬುವವರಿಗೆ ಗಾಯವಾಗಿದ್ದು, ಗಾಯಗೊಂಡ ವ್ಯಕ್ತಿಯನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ತೆರಳಿದ್ದ ಕೂಲಿ ಕಾರ್ಮಿಕರು, ಮಧ್ಯಾಹ್ನ ಮಳೆ ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು.ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಕಲಘಟಗಿ ಪೊಲೀಸ್ ದೂರು ದಾಖಲಾಗಿದೆ.