
ಪಬ್ಲಿಕ್ ರೈಡ್ ಹಾವೇರಿ: ನಗರದ ಕೇಂದ್ರ ಬಸ್ ನಿಲ್ದಾಣದ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಸ್ಥಳಕ್ಕೆ ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್‌ಪೀರ್ ಎಸ್ ಖಾದ್ರಿ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕಾಂಪ್ಲೆಕ್ಸ್‌ನಲ್ಲಿರುವ ಮೆಹಬೂಬ್‌ಸಾಬ್ ನೆಗಳೂರು ಎಂಬುವರಿಗೆ ಸೇರಿದ್ದ ಗೃಹೋಪಯೋಗಿ ಹಾಗೂ ಪೀಠೋಪಕರಣ ಮಳಿಗೆಯಲ್ಲಿ ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ಈ ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವುದು ವರದಿಯಾಗಿದೆ. ಬುಧವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಖಾದ್ರಿ ಅವರು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದು, ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಲಹಾಜ ಜಮಾದಾರ ಸೇರಿದಂತೆ ಹಲವರು ಹಾಜರಿದ್ದರು.