
ಧಾರವಾಡ
ಮೂರು ಅಂತಸ್ತಿನ ಕಟ್ಟಡದ ಮೇಲೆ ಹೋದ ಸಂದರ್ಭದಲ್ಲಿ ವ್ಯಕ್ತಿಯೋರ್ವನಿಗೆ ತಲೆಚಕ್ರ ಬಂದು ಬಿಲ್ಡಿಂಗ್ ಮೇಲಿಂದ ಆಯಾ ತಪ್ಪಿ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ಮಂಗಳವಾರ ತಡ ಸಂಜೆ ಧಾರವಾಡದಲ್ಲಿ ಸಂಭವಿಸಿದೆ.
ಧಾರವಾಡದ ಮಾಳಾಪುರದಲ್ಲಿ ಈ ದುರ್ಘಟನೆ ನಡೆದಿದೆ. ಅಮುದ್ದೀನ್ ಮಂಗಳಗಟ್ಟಿ (65) ಎಂಬ ವೃದ್ಧನೇ ಸಾವನ್ನಪ್ಪಿದ್ದ ವ್ಯಕ್ತಿಯಾಗಿದ್ದಾನೆ. ಕಟ್ಟಡದ ಮೇಲೆ ವೃದ್ಧ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಆತನಿಗೆ ತಲೆ ಸುತ್ತು ಬಂದು ಕಟ್ಟಡದ ಮೇಲಿಂದ ಬಿದ್ದಿದ್ದಾನೆ.
ಕೂಡಲೇ ಆತನನ್ನು ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದ ವೃದ್ಧ ಸಾವನ್ನಪ್ಪಿದ್ದಾನೆ. ಉಪನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.