
ಪಬ್ಲಿಕ್ ರೈಡ್ ಹುಬ್ಬಳ್ಳಿ
ಕಲ್ಲಿನ ಕ್ವಾರಿಯ ನೀರಿನಲ್ಲಿ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದ ಕಲ್ಲಿನ ಕ್ವಾರಿಯಲ್ಲಿ ನಡೆದಿದ್ದ ತಡವಾಗಿ ಬೆಳಕಿಗೆ ಬಂದಿದೆ.
ಮೃತನನ್ನು 40 ವರ್ಷದ ರುದ್ರಗೌಡ ಹೊನ್ನಪ್ಪಗೌಡ್ರ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಕೊಟಗೊಂಡಹುಣಸಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಬುಧವಾರ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದ, ಆದರೆ ವ್ಯಕ್ತಿಯ ಹೆಸರು ಸೇರಿ ವಿವರ ತಿಳಿದಿರಲಿಲ್ಲ. ಈಗ ವ್ಯಕ್ತಿ ವಿಳಾಸ ಸೇರಿ ಹೆಸರನ್ನು ಗ್ರಾಮೀಣ ಠಾಣೆಯ ಪೊಲೀಸರು ಪತ್ತೆ ಮಾಡಿದ್ದಾರೆ.
ಇನ್ನೂ ಮೃತ ರುದ್ರಗೌಡ ಕೆಲವು ದಿನಗಳಿಂದ ಮಾನಸಿಕ ಅಸ್ವಸ್ಥನಾಗಿದ್ದ, ಬುಧವಾರ ಎಂದಿನಂತೆ ಮನೆಯಿಂದ ಹೊರಹೋದವ ಊರು ಹೊರವಲಯದ ಕಲ್ಲಿನ ಕ್ವಾರಿಯಲ್ಲಿ ಬಿದ್ದು ಸಾವನಪ್ಪಿದ್ದಾನೆ ಎಂದು ಹೇಳಲಾಗಿದೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಬುಧುವಾರ ಸ್ಥಳಕ್ಕೆ ಭೇಟಿ ನೀಡಿದ
ಪೊಲೀಸರು ಶವವನ್ನು ಸ್ಥಳೀಯರ ಸಹಕಾರದೊಂದಿಗೆ ಮೇಲೆ ತೆಗೆದು ಕೀಮ್ಸ್ ಆಸ್ಪತ್ರೆಗೆ ರವಾನಿಸಿದರು. ಕಾನೂನು ಪ್ರಕ್ರಿಯೆ ಪೂರ್ಣಗೊಂಡ ಹಿನ್ನಲೆ ಮೃತನ ಶವವನ್ನು ಕುಟುಂಬಸ್ಥರಿಗೆ ಹಸ್ತಾರಿಸಿದ್ದು, ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.