
ಧಾರವಾಡ
ಇಟಂಗಿ ತುಂಬಿದ ಮಿನಿ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಅರ್ಧ ಗಂಟೆ ನರಳಿ ಧಾರುಣವಾಗಿ ಸಾವನಪ್ಪಿದ ಘಟನೆ ಧಾರವಾಡ ಹಳಿಯಾಳ ರಸ್ತೆಯ ಅಗ್ರೋ ನಗರದ ಬಳಿ ಸೋಮುವಾರ ತಡ ಸಂಜೆ ನಡೆದಿದೆ.
ಹಳಿಯಾಳ ತಾಲೂಕಿನ ವಿಠಲ ಬೋಡೆಕರ ಎಂಬಾತನೇ ಈ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ. ಟೆಂಪೊ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಸ್ಥಳಕ್ಕೆ ಅಂಬ್ಯುಲೆನ್ಸ್ ಬಂದಿರಲಿಲ್ಲ. ಅರ್ಧ ಗಂಟೆಯ ಬಳಿಕ ಅಂಬ್ಯುಲೆನ್ಸ್ ಬಂದಿದ್ದು, ಅಷ್ಟರಲ್ಲಾಗಲೇ ಬೈಕ್ ಸವಾರನ ಪ್ರಾಣಪಕ್ಷಿ ಹಾರಿ ಹೋಗಿತ್ತು. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.