
ಧಾರವಾಡ
ಕಾಶ್ಮೀರದಲ್ಲಿ ಪ್ರವಾಸಿಗರನ್ನು ಟಾರ್ಗೆಟ್ ಮಾಡಿಕೊಂಡು ಉಗ್ರರ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಸಿಎಂ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ ಲಾಡ ಅವರು ಧಾರವಾಡದಲ್ಲಿನ ತಮ್ಮ ಬುಧವಾರ ಕಾರ್ಯಕ್ರಮವನ್ನು ರದ್ದು ಮಾಡಿ ಹುಬ್ಬಳ್ಳಿ ವಿಮಾನ ನಿಲ್ದಾಣ ಮೂಲಕ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು.
ಕನ್ನಡಿಗರ ರಕ್ಷಣೆ ಜತೆಗೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ IPS ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ಕಳುಹಿಸಿದ್ದು, ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಕಾರ್ಮಿಕ ಸಚಿವ ಸಂತೋಷ ಲಾಡರನ್ನು ಮಂಗಳವಾರ ರಾತ್ರಿ ಕಳುಹಿಸಿದೆ. ಕಾಶ್ಮೀರದಲ್ಲಿ ಉಗ್ರರ ಅಟಹಾಸಕ್ಕೆ ಶಿವಮೊಗ್ಗ ಮೂಲದ ಉದ್ಯಮಿ ಸೇರಿ ಹಲವರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಈಗ ಕನ್ನಡಿಗರ ರಕ್ಷಣೆಯ ಜತೆಗೆ ಮೃತರ ಮೃತದೇಹ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯವರ ಸೂಚನೆ ಮೇರೆಗೆ ಮಂಗಳವಾರ ರಾತ್ರೋ ರಾತ್ರಿ ಕಾರ್ಮಿಕ ಸಚಿವ ಸಂತೋಷ ಲಾಡ್ ಧಾರವಾಡದಿಂದ ನೇರವಾಗಿ ಹುಬ್ಬಳ್ಳಿ ವಿಮಾನ ತೆರಳಿ, ಅಲ್ಲಿಂದ ಕಾಶ್ಮೀರಕ್ಕೆ ವಿಮಾನ ಮೂಲಕ ಪ್ರಯಾಣ ಬೆಳೆಸಿದರು.