
ಹುಬ್ಬಳ್ಳಿ
ಜಮ್ಮು ಮತ್ತು ಕಾಶ್ಮೀರ ನ ಅನಂತನಾಗ ಜಿಲ್ಲೆಯ ಪಹಲಗಾಮ್ ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ಘಟನೆಗೆ ಸಂಬಂಧಿಸಿದಂತೆ ಇಂದು ಮುಂಜಾನೆ ನಗರದ ಬಿವಿಬಿ ಕಾಲೇಜಿನ ಮುಂಭಾಗದಲ್ಲಿ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ ಸಮ್ಮುಖದಲ್ಲಿ ಚಕ್ರ ಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಶಾಂತಿಯುತ ಕಾಶ್ಮೀರ ಸ್ಥಾಪನೆ ಮಾಡಲು ಕ್ರಮಗಳನ್ನು ಕೈಗೊಂಡರು ಸಹ ನುಸುಳುಕೊರರು ಹಾಗೂ ಭಯೋತ್ಪಾದಕರ ಹಾವಳಿ ತಡೆಯಲು ಸಾಧ್ಯವಾಗಿಲ್ಲ.
ಇತ್ತೀಚೆಗೆ ನಡೆದ ವಲಸೆ ಕಾರ್ಮಿಕರ ಮೇಲಿನ ದಾಳಿ ನಿನ್ನೆ ನಡೆದ ಪ್ರವಾಸಿಗರ ಮೇಲಿನ ದಾಳಿಯನ್ನು ಗಮನಿಸಿದರೆ ಕಾಶ್ಮೀರದ ಶಾಂತಿ ಮತ್ತು ಭಾರತದದೊಂದಿಗಿನ ಏಕತೆಗೆ ವಿರುದ್ಧವಾಗಿ ಸವಾಲೊಡ್ಡುತ್ತಿರುವುದು ಎದ್ದು ಕಾಣುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರವು ಉಗ್ರರರ ವಿರುದ್ಧ ವ್ಯಾಪಕ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಭಯೋತ್ಪಾದಕರಿಗೆ ತಕ್ಕ ಪಾಠವನ್ನು ಕಲಿಸಿ ಉತ್ತರವನ್ನು ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಣಿಕಂಠ,ಸಿದ್ಧಾರ್ಥ ಕೋರಿ, ಮೌನೆಶ ಹಾಗೂ ಸಂಘಟನೆಯ ಕಾರ್ಯಕರ್ತರು ಇದ್ದರು.