
*ಬೆಳಗಾವಿ.: ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ʼಗೃಹಜ್ಯೋತಿʼಯನ್ನು ಜನರಿಗೆ ತಲುಪಿಸಲು ಹೆಚ್ಚಿನ ನಿಗಾ ವಹಿಸಿ ಕಾರ್ಯನಿರ್ವಹಿಸುವಂತೆ ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್‌ಪೀರ್ ಎಸ್. ಖಾದ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯ ಗಡಿ ತಾಲೂಕು ನಿಪ್ಪಾಣಿಯ ಬೋರಗಾಂವ್ ನಲ್ಲಿರುವ ಹೆಸ್ಕಾಂನ ಕಚೇರಿಗೆ ಭೇಟಿ ನೀಡಿದ ಅವರು, ಅಧಿಕಾರಿಗಳು, ಸಿಬ್ಬಂದಿಯ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸುವಂತೆ ತಿಳಿಸಿದರು.
ಗೃಹಜ್ಯೋತಿ ಯೋಜನೆಯಿಂದ ಹೊರಗುಳಿದಿರುವ ಕುಟುಂಬಗಳನ್ನು ಗುರುತಿಸಿ ಅವರಿಗೂ ಯೋಜನೆಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಗ್ರಾಹಕರು, ರೈತರಿಗೆ ಯಾವುದೇ ತೊಂದರೆಯಾಗದಂತೆ ಸಮಪರ್ಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಹೇಳಿದರು. ಬಳಿಕ ಅಲ್ಲೇ ಇರುವ ಪವರ್ ಗ್ರಿಡ್‌ಗೆ ತೆರಳಿ ವೀಕ್ಷಿಸಿದರು.
*ಟಿ.ಸಿ ದುರಸ್ತಿ ಕೇಂದ್ರಕ್ಕೆ ಭೇಟಿ:* ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್‌ಪೀರ್ ಎಸ್ ಖಾದ್ರಿ ಅವರು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿರುವ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರೈತರಿಗೆ ಹಾಗೂ ಗ್ರಾಹಕರಿಗೆ ನಿಗದಿತ ಸಮಯಕ್ಕೆ ವಿದ್ಯುತ್ ಪರಿವರ್ತಕಗಳು ಸಿಗಬೇಕು. ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.