
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ: ದಾಸರಹಳ್ಳಿ ಕ್ಷೇತ್ರದ ಪರಾಜಿತ ಕಾಂಗ್ರೆಸ್
ಅಭ್ಯರ್ಥಿ ಜಿ.ಧನಂಜಯ್ ಅವರ ಹುಟ್ಟುಹಬ್ಬವನ್ನು ತಮ್ಮ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ತಮ್ಮ ಸ್ವ ಗೃಹದಲ್ಲಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಹಿಳಾ ಮುಖಂಡರಾದ ಶ್ರೀಮತಿ ಹೇಮರಾಜೇಂದ್ರನ್, ನೇತ್ರ.ಹರ್ಷ, ಮನೋಜ್, ಪ್ರವೀಣ್, ದಾಸರಹಳ್ಳಿ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ರಾವ್, ಕಾರ್ಮಿಕ ಘಟಕದ ಆನಂದ್, ವೆಂಕಟರಾಜ್, ನಂದೀಶ್, ಕಿರಣ್ ಹಾಗೂ ಮುಂತಾದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಿಹಿ ತಿನ್ನಿಸುವ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದರು.