
ಧಾರವಾಡ
ಮಂಗಳೂರಿನಲ್ಲಿ ನಡೆದ ಹಿಂದೂ ಸಂಘಟನೆ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಹತ್ಯೆಕೋರರ ಎನಕೌಂಟರ್‌ಗೆ ಆಗ್ರಹಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಸೇರಿ ಹಿಂದೂ ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ನಗರದ ಕಲಾಭವನದಿಂದ ಜುಬ್ಲಿ ವೃತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಧಾರವಾಡ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರ ಸೇರಿ ಹಿಂದೂ ವಿರೋಧಿಗಳ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸದಾ ಹಿಂದೂ, ಹಿಂದುತ್ವಕ್ಕಾಗಿ ಹೋರಾಟ ಮಾಡುತ್ತಿದ್ದ ಸುಹಾಸ್ ಅವರನ್ನು ಜನಜಂಗುಳಿ ಇರುವ ಸ್ಥಳದಲ್ಲೇ ದುಷ್ಕರ್ಮಿಗಳು ಹಳೇ ದ್ವೇಷದ ಹಿನ್ನೆಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹಾಳಾಗುತ್ತಿದೆ. ಎಲ್ಲೆಂದರಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹೆಚ್ಚಾಗುತ್ತಲೇ ಬರುತ್ತಿದ್ದು, ಇಷ್ಟೆಲ್ಲ ಹಿಂದೂಗಳ ಹತ್ಯೆ ಹಾಗೂ ದೌರ್ಜನ್ಯಗಳು ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಲ್ಲ. ಹಿಂದೂ ವಿರೋಧಿ ಸಂಘಟನೆಗಳಿಗೆ ಸರ್ಕಾರ ಪ್ರತ್ಸಾಹಿಸುತ್ತಲೇ ಬರುತ್ತಿದೆ.
ಈ ಕೂಡಲೇ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವುದರ ಜತೆಗೆ ಎನಕೌಂಟರ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.