
ಹುಬ್ಬಳ್ಳಿ
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಾಗಲಕೋಟಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ನಿಶ್ಚಿತಾರ್ಥ ಹಿನ್ನಲೆ ಮರಳಿ ಬರುವಾಗ ಈ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟವರನ್ನು ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.