ಪಬ್ಲಿಕ್ ರೈಡ್ ನ್ಯೂಸ್ ನೆಲಮಂಗಲ: ಅ.12ರಂದು ಮಂಗಳವಾರ ಬೆಳಗ್ಗೆ 11ಗಂಟೆಗೆ ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಬಸವಣ್ಣ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ವಹಿಸಲಿದ್ದು ಶಾಸಕ ಎನ್.ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ತಾಲೂಕು ಆದ್ಯಕ್ಷ ಬೂದಿಹಾಲ್‌ಕಿಟ್ಟಿ ವಹಿಸಲಿದ್ದು ನೆ.ಯೋ.ಪ್ರಾಧಿಕಾರ ಅದ್ಯಕ್ಷ ಎಂ.ನಾರಾಯಣ್‌ಗೌಡ ಹಾಗೂ ನಗರಸಭೆ ಅದ್ಯಕ್ಷ ಎನ್.ಗಣೇಶ್ ನಿಟಕಪೂರ್ವ ಪಾಧಿಕಾರಿಗಳಿಗೆ ಸನ್ಮಾನ, ಸಂಘದ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ಹಾಗೂ ಬಮೂಲ್ ನಿರ್ದೇಶಕ ಭವಾನಿಶಂಕರ್‌ಬೈರೇಗೌಡ್ರು ಪ್ರತಿಭಾಪುರಸ್ಕಾರ ನೇರವೇರಿಸಲಿದ್ದಾರೆ. ಜತೆಗೆ ನಿವೃತ್ತ ಉಪಸಂಪಾದಕ ಉದಯ್‌ಕುಮಾರ್ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಪ್ರಯುಕ್ತ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ನಿಕಟಪೂರ್ವ ತಾಲೂಕು ಸಮಿತಿ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಗೆ ತಾಲೂಕಿನ ಜಿಲ್ಲಾ ನಿರ್ದೇಶಕರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪ್ರಧಾನ ಕಾರ್ಯದರ್ಶಿ ವಿಜಯ್‌ವೀಳ್ಯದೆಲೆ ಬಾವಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
