ಧಾರವಾಡ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಶಿಂಗನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ.
ಹೂವಿನಹಡಗಲಿಯ ಹೊನ್ನಪ್ಪ (46) ಎಂಬಾತನೇ ಈ ಅಪಘಾತದಲ್ಲಿ ಸಾವನ್ನಪ್ಪಿದ ಪಾದಚಾರಿ ಆಗಿದ್ದಾನೆ.
ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಯು ರಸ್ತೆ ದಾಟುತ್ತಿದ್ದ ಹೊನ್ನಪ್ಪನಿಗೆ ಡಿಕ್ಕಿ ಹೊಡೆದ ಪರಿಣಾಮ ಹೊನ್ನಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.
